ಬೆಂಗಳೂರು : ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಶೀಘ್ರದಲ್ಲೇ ನೇಮಕಾತಿ ನಡೆಯಲಿದೆ. ಈ ಕುರಿತು ಹೈ ಕಮಾಂಡ್ ಬುಲಾವ್ ನೀಡಿದ ಬೆನ್ನಲ್ಲೇ ಇಂದು ದೆಹಲಿಗೆ ಸಿಟಿ ರವಿ ಪ್ರಯಾಣ ಬೆಳೆಸಲಿದ್ದಾರೆ ಅದಕ್ಕೂ ಮುನ್ನ ನಿನ್ನೆ ಕೇಶವ ಕೃಪಾಕಕ್ಕೆ ಭೇಟಿ ನೀಡಿ ಆರ್ ಎಸ್ ಎಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. BJP ಹೈಕಮಾಂಡ್ ನಿಂದ ಬುಲಾವ್ ಬರುವುದಿದ್ದಂತೆ ಚಾಮರಾಜಪೇಟೆಯಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿ ಮುಖಂಡರಾದ ಮುಕುಂದ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮುಂದಿನ ವಾರ ಅಧಿಕೃತವಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಟಿ ರವಿ ಅವರ ಹೆಸರು ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ನಳಿನ್ ಕುಮಾರ್ ಕಟೀಲ್ ಅವರ ಜಾಗಕ್ಕೆ ಸಿಟಿ ರವಿ ಅವರು ಆ ಹುದ್ದೆಯನ್ನು ಅಲಂಕರಿಸುವ ಸಾಧ್ಯತೆ ಹೆಚ್ಚಿದೆ ಎಂದು ಎನ್ನಲಾಗುತ್ತಿದೆ. ಹುದ್ದೆ ಸಿಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಕುರಿತು ಸಂಘ ಪರಿವಾರದವಾರದ ನಾಯಕರನ್ನು ಸಿಟಿ ರವಿ ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ಕುರಿತು ನಿನ್ನೆ (ಭಾನುವಾರ) ಮಾತನಾಡಿದ ಸಿಟಿ ರವಿ, ‘ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ.ನಾನು ಬಿಜೆಪಿ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತ ಪಕ್ಷವು ನನಗೆ ಯಾವುದೇ ಹುದ್ದೆಯನ್ನು ನೀಡಿದರು ಅದನ್ನು ನಾನು ಸಮರ್ಥವಾಗಿ ನಿಭಾಯಿಸುತ್ತೇನೆ. ರಾಜ್ಯಾಧ್ಯಕ್ಷ ಕುರಿತಂತೆ ಯಾರಿಗೆ ಯಾವ ಸ್ಥಾನ ಕೊಡಬೇಕು ಎಂದು ದೊಡ್ಡವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ವರದಿ : ಚಂದ್ರು ಆರ್ ಭಾನಾಪೂರ್
(ವಿವಿಧ ಮೂಳಗಳಿಂದ ವಿಷಯ ಸಂಗ್ರಹ)