BREAKING : ಸರ್ಕಾರದ ಪ್ರಭಾವಿ ಸಚಿವನಿಗೆ ಹೈಕೋರ್ಟ್‌ ಶಾಕ್‌..!!

You are currently viewing BREAKING : ಸರ್ಕಾರದ ಪ್ರಭಾವಿ ಸಚಿವನಿಗೆ ಹೈಕೋರ್ಟ್‌ ಶಾಕ್‌..!!

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಅವರ ಶಾಸಕ ಸ್ಥಾನ ಅನರ್ಹತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಹೈಕೋರ್ಟ್‌ ನೋಟಿಸ್‌ ನೀಡಿದೆ. ಇದರ ಬೆನ್ನಲ್ಲೇ ಇಂದು ಶಾಸಕರಾಗಿ ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ಈ ಅರ್ಜಿಯ ಹಿನ್ನಲೆಯಲ್ಲಿ ಪ್ರಿಯಾಂಕ್ ಖರ್ಗೆಗೂ ಹೈಕೋರ್ಟ್ ನೋಟಿಸ್ ನೀಡಿದೆ. ಈ ಮೂಲಕ ಸರ್ಕಾರದ ಪ್ರಭಾವಿ ಸಚಿವ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್‌ ಶಾಕ್‌ ನೀಡಿದೆ.

ಶಾಸಕನಾಗಿ ಆಯ್ಕೆ ಆಗಿರುವ ಪ್ರಿಯಾಂಕ್ ಖರ್ಗೆ ಆಯ್ಕೆಯನ್ನು ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಪಂಚಾಯ್ತಿ ಚುನಾವಣೆಯ ಜಾತಿ ಪ್ರಮಾಣಪತ್ರವನ್ನು ಖರ್ಗೆ ಸಲ್ಲಿಸಿದ್ದಾರೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿತ್ತು.

ಕಾಂಗ್ರೆಸ್‌ನ ಮಹತ್ವದ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿ ದ್ದಾರೆ ಎಂದು ಆರೋಪಿಸಿ ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಹಾಗಾಗಿ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಶಾಸಕ ಪ್ರಿಯಾಂಕ್ ಖರ್ಗೆ ಆಯ್ಕೆ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಖರ್ಗೆ ವಿರುದ್ಧ ವಾದಿಸಿದ್ದಾರೆ.

ಈ ಅರ್ಜಿಯ ಹಿನ್ನಲೆ ಹೈಕೋರ್ಟ್ ನ್ಯಾಯಪೀಠವು ಮುಂದಿನ ತಿಂಗಳು ಸೆಪ್ಟೆಂಬರ್ 5ರಂದು ಕೋರ್ಟ್ ಗೆ ಹಾಜರಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ಜಾರಿಗೊಳಿಸಿದೆ ಎಂದು ಮಾಹಿತಿ ಬಂದಿದೆ.

Leave a Reply

error: Content is protected !!