ಬೆಂಗಳೂರು : ಕಳೆದ ಒಂದು ವಾರದಿಂದ ಸಾಧಾರಣೆ ಮಳೆಯಾಗುತ್ತಿದ್ದು, ಇದೀಗ ವರುಣನ ಅಬ್ಬರ ಇಂದಿನಿಂದ ಮತ್ತೆ ಜೋರಾಗಲಿದೆ. ಈ ನಡುವೆ ಬೆಂಗಳೂರಿನಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬಾಗಲಕೋಟೆ, ಉಡುಪಿ , ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಹಾವೇರಿ, ಕಲಬುರಗಿ, ಬಳ್ಳಾರಿ, ನಗರ, ಬೆಳಗಾವಿ, ಬೀದರ್, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.