ಕೊಪ್ಪಳ : ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ
ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭವು ನಾಳೆ (ಆಗಸ್ಟ್ 06ರ) ಬೆಳಗ್ಗೆ 9.15ಕ್ಕೆ ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ನಡೆಯಲಿದೆ.
ಅಮೃತ ಭಾರತ ಸ್ಟೇಷನ್ ಯೋಜನೆಯಡಿ ರೈಲ್ವೆ ಸಚಿವಾಲಯದ ರೈಲ್ವೆ ಮಂಡಳಿಯ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅವರಿಂದ ನಡೆಯುವ ಈ ಸಮಾರಂಭದಲ್ಲಿ ಕೇಂದ್ರ ರೈಲ್ವೆ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್, ಕಲ್ಲಿದಲು ಮತ್ತು ಗಣಿ ಖಾತೆ ಸಚಿವರಾದ ರಾವ್ ಸಾಹೇಬ್ ಪಾಟೀಲ್ ದಾನ್ವೆ, ರಾಜ್ಯ ಖಾತೆಯ ಕೇಂದ್ರ ರೈಲ್ವೆ ಮತ್ತು ಜವಳಿ ಖಾತೆ ಸಚಿವರಾದ ದರ್ಶನಾ ಜರ್ದೋಶ್, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಘನ ಉಪಸ್ಥಿತರಿರುವರು ಎಂದು ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.