ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

You are currently viewing ಆರೋಗ್ಯ ಇಲಾಖೆ ಕಾರ್ಯಕ್ರಮಕ್ಕೆ ಬೀದಿನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾಂಗ್ ಮತ್ತು ಡ್ರಾಮಾ ಡಿವಿಜನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾವಣೆಯಾಗಿರುವ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಾತಂಡದಲ್ಲಿ ಕನಿಷ್ಠ 6 ರಿಂದ 8 ಜನ ಕಲಾವಿದರು ಇರಬೇಕು. ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಇರುವುದು ಕಡ್ಡಾಯ. ಕಲಾತಂಡದವರು ಕೊಪ್ಪಳ ಜಿಲ್ಲೆಯವರಾಗಿದ್ದು, ಸಂಗೀತ ಸಲಕರಣೆಗಳನ್ನು ಹಾಗೂ ಸಮವಸ್ತç ಹೊಂದಿರಬೇಕು. ಜಿಲ್ಲೆಗೆ ಒಟ್ಟು 4 ಕಲಾ ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.
ಆಸಕ್ತ ಅರ್ಹ ಬೀದಿನಾಟಕ ಕಲಾತಂಡಗಳು ತಮ್ಮ ತಂಡದ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವ ದಾಖಲೆಗಳ ಸಹಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ ಕೊಪ್ಪಳ ಇವರಿಗೆ ಆಗಸ್ಟ್ 14ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಕಲಾ ತಂಡಗಳಿಗೆ ಆಗಸ್ಟ್ 17ರ ಬೆಳಗ್ಗೆ 10.30ಕ್ಕೆ ಹಳೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯ್ಕೆ ಪ್ರಕ್ರಿಯ ಏರ್ಪಡಿಸಲಾಗುತ್ತದೆ. ಅರ್ಜಿ ಸಲ್ಲಿಸಿದ ಕಲಾತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ 4 ತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಆಸಕ್ತ ಬೀದಿನಾಟಕ ಕಲಾತಂಡಗಳು ನಿಗದಿತ ಅವಧಿಯೊಳಗೆ ಕಚೇರಿ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!