ಕೊಪ್ಪಳ : ಕೊಪ್ಪಳ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಡಿಪ್ಲೋಮಾ ಕೋರ್ಸಗಳ ಪ್ರವೇಶಾತಿಗೆ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಕೋರ್ಸಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (ಡಿಟಿಡಿಎಂ) ಕೋರ್ಸಗಳಲ್ಲಿ 2, ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ (ಡಿಎಂಸಿಹೆಚ್)ನಲ್ಲಿ 18 ಸೀಟುಗಳು ಲಭ್ಯವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿಗೆ ಜಿ.ಟಿ.ಟಿ.ಸಿಯ ಕೊಪ್ಪಳ ನೂತನ ಕೇಂದ್ರದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಕಾರ್ಯಾಲಯಕ್ಕೆ ಅಥವಾ, ವಿಭಾಗದ ಮುಖ್ಯಸ್ಥರಾದ ಮೌನೇಶ್ ದೂ.ಸಂ: 7507094445, 9986088894ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.