ಕುಕನೂರು : ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕಲ್ಯಾಣ ಕರ್ನಾಟಕದ ಕೊಡುಗೆ ಅಪಾರವಾಗಿದ್ದು, ಇಂದಿಗೂ ಸ್ವಾತಂತ್ರ್ಯ ಹೋರಾಟದ ವಿರೋಚಿತ ನೆನಪುಗಳು ಅಚ್ಚಳಿಯದೆ ಉಳಿದೆವೆ ಎಂದು ವಿದ್ಯಾನಂದ ಗುರುಕುಲ ಕಾಲೇಜ್ ನ ನಿವೃತ್ತ ಪ್ರಾಂಶುಪಾಲ ಕೆ ಆರ್ ಕುಲಕರ್ಣಿ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಬಲಿಷ್ಠ ಭಾರತ ನಿರ್ಮಾಣ ಯುವಕರ ಕೈಯಲ್ಲಿದೆ, ಯುವ ಜನತೆ ದೇಶ ಪ್ರೇಮ ಬೆಳಸಿಕೊಳ್ಳಬೇಕು ಎಂದು ಹೇಳಿದರು.
ತಹಸೀಲ್ದಾರ್ ಎಚ್ ಪ್ರಾಣೇಶ್ ಅವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕುಕನೂರು ಠಾಣೆಯ ಪೊಲೀಸ್ ಸಿಬಂದಿಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕುಕನೂರು ಪಟ್ಟಣದ ಪಂಚಾಯತ್ ಮುಖ್ಯಾಧಿಕಾರಿ ಪಿ ಸುಬ್ರಮಣ್ಯ, ಎ ಪಿ ಎಂ ಸಿ ಕಾರ್ಯದರ್ಶಿ ಸಿದ್ದಯ್ಯ ಹಿರೇಮಠ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವೆಂಕಟೇಶ್ ವಂದಾಲಿ, ಕಂದಾಯ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.