ಕೊಪ್ಪಳ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ನಾಳೆ (ಆಗಸ್ಟ್ 19ರಂದು) ಬೆಳಿಗ್ಗೆ 11ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ ಪ್ರತಿ ತಿಂಗಳಿನ 3ನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.