ಆ.30ಕ್ಕೆ ಮನೆ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇದೇ ಆಗಸ್ಟ್ 30 ರಂದು ಕುಟುಂಬದ ಯಜಮಾನಿ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಜಮೆ ಆಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರು ಮಾತನಾಡಿರುವ ಹೆಬ್ಬಾಳ್ಕರ್ ಅವರು, ಆ.30 ರಂದು ಮೈಸೂರ್ ನಲ್ಲಿ ನಡೆಯುವ ಬ್ರಹತ್ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಅವರಿಂದ ಚಾಲನೆ ಸಿಗಲಿದೆ ಎಂದರು.
ಈ ಮೊದಲು ಬೆಳಗಾವಿ ಯಲ್ಲಿ ಸಿಗದಿಯಾಗಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮ ಈಗ ಮೈಸೂರಿಗೆ ಶಿಫ್ಟ್ ಆಗಿದ್ದು ಆ.30 ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಅಧಿಕೃತವಾಗಿ ಚಾಲನೆ ಸಿಗಲಿದೆ.
ಚಾಮರಾಜನಗರ, ಮಂಡ್ಯ, ಕೊಡಗು, ಮೈಸೂರು ಜಿಲ್ಲೆಯ ಸುಮಾರು ಒಂದೂವರೆ ಲಕ್ಷ ಪಲಾನುಭವಿ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯ ನಾಯಕರ ಸಮ್ಮುಖದಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.