BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ..!!

You are currently viewing BIG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ ಘೋಷಣೆ..!!

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ರಾಜ್ಯದ ಸರ್ಕಾರದಿಂದ ಮತ್ತೊಂದು ಯೋಜನೆ ಘೋಷಣೆ ಮಾಡಲಾಗಿದೆ. ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕಾಗಿ “ಶಕ್ತಿ ಯೋಜನೆ”, ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ನೀಡುವ “ಗೃಹಲಕ್ಷ್ಮಿ ಯೋಜನೆ” ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಇದೇ ಆಗಸ್ಟ್.25ರ ವರಮಹಾಲಕ್ಷ್ಮೀ ಹಬ್ಬಕ್ಕೆ ಮತ್ತೊಂದು ಭಾಗ್ಯವನ್ನು ನೀಡಲಾಗಿದೆ. ಅದೇ ಮುಜುರಾಯಿ ಇಲಾಖೆಯ ದೇವಾಲಯಗಳಲ್ಲಿ ಅರಿಶಿಣ-ಕುಂಕುಮ ವಿತರಣೆ ಮಾಡುವ ಯೋಜನೆಗೆ ಸರ್ಕಾರ ಆದೇಶಿಸಿದೆ.

ಈ ಕುರಿತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಇದೇ ಆಗಸ್ಟ್.25ರಂದು “ವರಮಹಾಲಕ್ಷ್ಮೀ ವ್ರತ”ದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಣೆಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!