You are currently viewing ALERT : ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ..!

ALERT : ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ..!

ಕೊಪ್ಪಳ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ(ರಿ) ಹಳಿಯಾಳ ತರಬೇತಿ ಸಂಸ್ಥೆಯಿAದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 10 ದಿನಗಳ ಪಾಸ್ಟಫುಢ್ ಸ್ಟಾಲ್ ಉದ್ಯಮಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ ಎರೆಹುಳ ಮತ್ತು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಸೆಪ್ಟಂಬರ್ 03 ಕೊನೆಯ ದಿನವಾಗಿದ್ದು, ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಹಾಗೂ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ(ರಿ) ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಸಂಸ್ಥೆಯ ದೂರವಾಣಿ ಸಂಖ್ಯೆ: 9980510717, 9482188780, 9632225123, 9483485489 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!