ಬೆಂಗಳೂರು : “ಚಂದ್ರಯಾನ-3” ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ಕೇಂದ್ರಕ್ಕೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿದ್ದಾರೆ. ನಾಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೇಟಿಯಾಗಲಿದ್ದಾರೆ.
“ಚಂದ್ರಯಾನ-3” ಸಾಫ್ಟ್ ಲ್ಯಾಂಡಿಂಗ್ ಆದ ಬೆನ್ನಲ್ಲೇ, ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವ ಸಲುವಾಗಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಬೆಳಗ್ಗೆ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಇಂದು ಬೆಳಗ್ಗೆ 10.30ಕ್ಕೆ ಭೇಟಿ ನೀಡಲಿದ್ದಾರೆ.
*ಆಗಸ್ಟ್ 26 ರಂದು ಪ್ರಧಾನಿ ನರೇಂದ್ರ ಮೋದಿ ಇಸ್ರೋ ಕೇಂದ್ರಕ್ಕೆ ಭೇಟಿ*
ಚಂದ್ರಯಾನ-3 ಯಶಸ್ವಿಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಶನಿವಾರ ಸಂಜೆ 7 ಗಂಟೆಗೆ ಇಸ್ರೋ ಕಚೇರಿಗೆ ಭೇಟಿ ನೀಡಲಿರುವಂತ ಅವರು, ವಿಜ್ಞಾನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ.