ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ದುರ್ಬಲಗೊಂಡಿದ್ದು, ಕರಾವಳಿ ಜಿಲ್ಲೆಗಳ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಆದರೇ, ಈ ತಂಗಳಲ್ಲಿ ವಾರಾಂತ್ಯಕ್ಕೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವರ್ಷಧಾರೆ ಆಗಮನ ವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕಳೆದ ಎರಡು ವಾರದಿಂದ ಒಳನಾಡು ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಿಲ್ಲ. ಅದರಲ್ಲೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗದೇ ಒಣ ಹವೆ ಮುಂದುವರೆದಿದೆ. ಇದು ಬಿತ್ತನೆ ಚಟುವಟಿಕೆ ಮೇಲೆ ಭಾರೀ ಪರಿಣಾಮ ಬೀರಿದ್ದು, ರೈತರು ಸಮಸ್ಯೆಗೆ ತುತ್ತಾಗಿದ್ದಾರೆ.
ಇದೇ ಶನಿವಾರ ಅಥವಾ ಭಾನುವಾರದಿಂದ ಕೆಲ ದಿನಗಳವರೆಗೆ ಮಲೆನಾಡು ಜಿಲ್ಲೆಗಳಾದಂತ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಕೋಲಾರ, ಕೊಪ್ಪಳ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.