ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಹಣಕಾಸು ಇಲಾಖೆ, ಅರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರ ಉದ್ಯೋಗಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ನೇಮಕಾತಿ ಪತ್ರ ವಿತರಿಸಲಿದ್ದಾರೆ.
ದೇಶ್ಯಾದ್ಯಂತ 45 ಕಡೆಗಳಲ್ಲಿ ರೋಜಾಗಾರ್ ಮೇಳ ಏರಪಡಿಸಲಾಗಿತ್ತು. ಇದರಲ್ಲಿ ಕೇಂದ್ರ ಸರಕಾರದ ಇಲಾಖೆಗಳು, ರಾಜ್ಯ ಸರಕಾರ, ಕೇಂದ್ರಾಡಳಿತ ಪ್ರದೇಶಗಳ ಲ್ಲಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಪ್ರಧಾನಿ ಮೋದಿ ಅವರು, ರೋಜಗಾರ್ ಮೇಳ ಮಹತ್ವ ಪಡೆದುಕೊಂಡಿದೆ ಎಂದು ಪಿ ಎಂ ಓ ಕಚೇರಿ ತಿಳಿಸಿದೆ.
ಈ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಲಿದ್ದಾರೆ ಎಂದು ಪಿ ಎಂ ಓ ಕಚೇರಿ ತಿಳಿಸಿದೆ.