ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ವನ್ನು ಈ ಬಾರಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ.
ರಾಜ್ಯ ಸರ್ಕಾರಕ್ಕೆ ನೂರು ದಿನ ಪೋರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ಮೈಸೂರು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಈ ವಿಷಯ ತಿಳಿಸಿದ್ದಾರೆ.
ನಾದಬ್ರಹ್ಮ ಹಂಸಲೇಖ ಅವರು ಈ ಬಾರಿಯ ದಸರಾವನ್ನು ಉದ್ಘಾಟೀಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.