You are currently viewing ಆಗಸ್ಟ್ 31ರಂದು ಕೊಪ್ಪಳದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ

ಆಗಸ್ಟ್ 31ರಂದು ಕೊಪ್ಪಳದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಗಸ್ಟ್ 31ರಂದು ಬೆಳಿಗ್ಗೆ 11ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಕಾರಟಗಿಯ ಶಿಕ್ಷಕರಾದ ಜಗದೀಶ ಭಜಂತ್ರಿ ಅವರು ಶ್ರೀ ನುಲಿಯ ಚಂದಯ್ಯನವರ ಕುರಿತು ವಿಶೇಷ ಉಪನ್ಯಾಸ ನೀಡುವರು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!