ಬೆಂಗಳೂರು : ನಾಳೆಯಿಂದ ಸೆಪ್ಟೆಂಬರ್.7ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದು ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ‘ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್.7ರವರೆಗೆ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.
ರಾಜ್ಯದ ಉತ್ತರ ಒಳನಾಡಿನ ಕೊಪ್ಪಳ ಸೇರಿ ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಲಾಗಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಅನ್ನು ಬಾಗಲಕೋಟೆ, ಯಾದಗಿರಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ನೀಡಲಾಗಿದೆ. ಇದಲ್ಲದೇ ಸೆಪ್ಟೆಂಬರ್.4 ರಂದು ಕೂಡ ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇಂದು ಬೀದರ್, ಕಲಬುರ್ಗಿ ಜಿಲ್ಲೆಯಲ್ಲಿ ಮಳೆಯಾಗಲಿದೆ. ನಾಳೆ ರಾಯಚೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿ ಜಿಲ್ಲೆಗಳಾದಂತ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ಭಾರೀ ಮಳೆಯಾಗಲಿದೆ.