LOCAL NEWS : ಸಂಕನೂರ ಗ್ರಾಮದಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ

You are currently viewing LOCAL NEWS : ಸಂಕನೂರ ಗ್ರಾಮದಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ

ಯಲಬುರ್ಗಾ : ಭಾರೀ ಮಳೆಗೆ ಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿದೆ. ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರ ಗ್ರಾಮದಲ್ಲಿ ನಡೆದಿದೆ.

ನಿನ್ನೆ (ರವಿವಾರ) ತಡರಾತ್ರಿ ಸುರಿದ ಭಾರೀ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ. ಕಳೆದ ವರ್ಷ ಇದೇ ಹಳ್ಳದಲ್ಲಿ ದಾಟುವಾಗ ನಾಲ್ವರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಹಳ್ಳ ದಾಟಲು ಸೇತುವೆ ನಿರ್ಮಾಣ ಕಾರ್ಯ ಮಾಡಲಾಗುತ್ತಿದ್ದು, ವಾಹನ ಸವಾರರಿಗಾಗಿ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ತಡರಾತ್ರಿ ಸುರಿದ ಮಳೆಗೆ ತಾತ್ಕಾಲಿಕ ಸೇತುವೆಯೇ ಕಾಣದಂತಾಗಿದೆ. ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದರಿಂದ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

Leave a Reply

error: Content is protected !!