ಕೊಪ್ಪಳ : ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 05ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಕ್ಲಿಕ್ ಮಾಡಿ….KOPPAL NEWS : ಮಕ್ಕಳ ಹಕ್ಕುಗಳ ಸಂರಕ್ಷಣೆ, ಪಾಲನೆಗೆ ಎಲ್ಲ ಇಲಾಖೆಗಳ ಸಹಭಾಗಿತ್ವ ಅತ್ಯಗತ್ಯ
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ಕ್ಲಿಕ್ ಮಾಡಿ….BIG BREAKING : ಜಿಲ್ಲಾ ಮಟ್ಟದ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಭಾಜನರಾದ ಮಹಿಳಾ ಶಿಕ್ಷಕಿಯರು..!!
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಕರ್ನಾಟ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣವರ್ ಹಾಗೂ ಪ್ರಾಚಾರ್ಯರ ಸಂಘದ ಅಧ್ಯಕ್ಷರು, ಶಿಕ್ಷಕರ ಮತ್ತು ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
ಕೊಪ್ಪಳ : 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ “ಜಿಲ್ಲಾ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಸೆಪ್ಟೆಂಬರ್ 05ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕ್ಲಿಕ್ ಮಾಡಿ….LOCAL NEWS : ಸಂಕನೂರ ಗ್ರಾಮದಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ
ಮುಖ್ಯ ಶಿಕ್ಷಕರಾದ ರಾಘವೇಂದ್ರ ಕಂಠಿ, ದೈಹಿಕ ಶಿಕ್ಷಣ ಶಿಕ್ಷಕರಾದ ಶರಣಬಸಪ್ಪ ಮಣ್ಣೂರ, ಸಹ ಶಿಕ್ಷಕರಾದ ಹೆಚ್.ಕವಿತಾ ನಾಗನೂರು, ಗುರುಸ್ವಾಮಿ ಆರ್., ಈರಮ್ಮ ಉರ್ಪ್ ಪೂರ್ಣಿಮಾ, ನಟರಾಜ ಸೋನಾರ, ಗಿರಿಜಾ ಶರಣಯ್ಯ ಧರ್ಮಸಾಗರ, ಪರಶುರಾಮ ಬಿಲಂಕರ, ಜಿ.ಶ್ರೀದೇವಿ ಕೃಷ್ಣಪ್ಪ, ಜಹಾನ್ ಆರಾ, ಶಶಿಕಲಾ ಪಾಟೀಲ, ಜಯಶ್ರೀ ಕೊತಬಾಳ, ಕರಿಯಪ್ಪ ದೂಡ್ಯಾಳ, ಪರಶುರಾಮ ಹಾಗೂ ನಿಂಗಪ್ಪ ಶೇಗುಣಸಿ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.