LOCAL NEWS : ಈ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್‌ ಕಿಡಿ..!!

You are currently viewing LOCAL NEWS : ಈ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ : ಮಾಜಿ ಸಚಿವ ಹಾಲಪ್ಪ ಆಚಾರ್‌ ಕಿಡಿ..!!

ಯಲಬುರ್ಗಾ : ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಹಾಗೂ ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು (ಸೆ. 8ರಂದು) ಇಡೀ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಯಿತು. ಅದರಂತೆ ಇಂದು ಯಲಬುರ್ಗಾ ಪಟ್ಟಣದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ್‌ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

KOPPAL NEWS : ವಿಕಲಚೇತನರಿಗೆ ವಿವಿಧ ಯೋಜನೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..!!

BIG NEWS : ನಾಳೆಯಿಂದ ಸೆ.11 ರವರೆಗೆ ನಾಲ್ಕು ದಿನ ಮಳೆ..!

ಯಲಬುರ್ಗಾ ಪಟ್ಟಣದ ಭಾರತೀಯ ಜನತಾ ಪಾರ್ಟಿಯ ಕಚೇರಿಯಿಂದ ಮುಖ್ಯ ರಸ್ತೆಯ ಮೂಲಕ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಹಾಲಪ್ಪ ಆಚಾರ್‌, ರಾಜ್ಯದಲ್ಲಿ ಮಳೆ ಇಲ್ಲದೆ ಬರ ಆವರಿಸಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸರಕಾರ ಸ್ಪಂದಿಸುತ್ತಿಲ್ಲ. ನಮ್ಮ ಅವಳಿ ತಾಲ್ಲೂಕುಗಳಲ್ಲಿ ಬರದ ದುಸ್ಥಿತಿ ಇದೆ. ಆದರೆ, ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರಕಾರ ಇನ್ನೂ ಘೋಷಿಸಿಲ್ಲ ಹಾಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ. ಜೊತೆಗೆ ಈ ಹಿಂದಿನ ಬಿಜೆಪಿ ಸರ್ಕಾರದ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳನ್ನು ಈ ಕಾಂಗ್ರೆಸ್ ಸರ್ಕಾರವು ರದ್ದು ಮಾಡಿದೆ. ಇದರಿಂದ ರೈತರಿಗೆ ಹಾಗೂ ಬಡ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಬಹಳಷ್ಟು ತೊಂದರೆ ಆಗಿದೆ. ಹಾಗಾಗಿ ಈ ಸರ್ಕಾರ ರೈತವಿರೋಧಿ ನೀತಿ ಎಂದು ಹಾಲಪ್ಪ ಆಚಾರ್‌ ಟೀಕಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಿಶ್ವನಾಥ ಮರಿಬಸಪ್ಪನವರ್‌, ಈರಣ್ಣ ಹುಬ್ಬಳ್ಳಿ, ಕಳಕಪ್ಪ ಕಂಬಳಿ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!