NEWS ALERT : ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಅವರಿಂದ ಸೆಪ್ಟೆಂಬರ್ 25ಕ್ಕೆ “ಜನತಾ ದರ್ಶನ”!

You are currently viewing NEWS ALERT : ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಅವರಿಂದ ಸೆಪ್ಟೆಂಬರ್ 25ಕ್ಕೆ “ಜನತಾ ದರ್ಶನ”!

ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರಿಂದ “ಜನತಾ ದರ್ಶನ” ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಕಲಬುರಗಿಯ ಹೋಂಗಾಡ್೯ ಕಮಾಂಡೆಂಟ್ ಸಂತೋಷ ಕುಮಾರ ಪಾಟೀಲ್ ಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ತೆರಳಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಾರೆ. ಅಂತಹ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದರಿಂದ ಜಿಲ್ಲಾಮಟ್ಟದಲ್ಲಿ ಈ ಕಾರ್ಯಕ್ರಮ ಆಯೋಜಿಸಿದೆ.

LOCAL EXPRESS : ಗುದ್ನೇಶ್ವರ ಮಠದ ಜಮೀನು ವಿವಾದಕ್ಕೆ ಟ್ವಿಸ್ಟ್ . ಸೇವಾದಾರರ ಜಮೀನು ಪಟ್ಟಾಗೆ ಜಿಲ್ಲಾಧಿಕಾರಿಗೆ ಶಾಸಕರ ಪತ್ರ.!

ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Leave a Reply

error: Content is protected !!