Karnataka Bandh : “ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ”..! : ಹೀಗೆ ಅಂದಿದ್ಯಾಕೆ?
ಮೈಸೂರು : ಜಿಲ್ಲೆಯ ಶ್ರೀರಂಗಪಟ್ಟಣದ ಗುಂಬಜ್‌ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ವೀರ ಸೇನಾನಿ, ಹುತಾತ್ಮ ಟಿಪ್ಪು ಸುಲ್ತಾನ್ ಸಮಾಧಿ ಎದುರು ಕನ್ನಡ ಚಲನಚಿತ್ರವೊಂದರ ಅಶ್ಲೀಲ ಹಾಡಿನ ಚೀತ್ರೀಕರಣ ನಡೆದಿದ್ದು, ಇದೀಗ ಮುಸ್ಲೀಮರ ಆಕ್ರೋಶಕ್ಕೆ ಕಾರಣವಾಗಿದೆ. ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಕೂಡಲೇ ಸೆನ್ಸಾರ್ ಮಂಡಳಿ ಈ ದೃಶ್ಯವನ್ನು ತೆಗೆಯಬೇಕು ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ.
BREAKING : ಕರ್ನಾಟಕ ಬಂದ್ ಎಫೆಕ್ಟ್ : ಮುಖ್ಯಮಂತ್ರಿ ಸಿದ್ದು ನಿವಾಸದ ಬಳಿ ಹೈ ಅಲರ್ಟ್..!
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಪ್ರತಿಯೊಬ್ಬ ಮುಸಲ್ಮಾನರಿಗೆ ಗುಂಬಜ್ ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಟಿಪ್ಪು ಸುಲ್ತಾನರು ಮತ್ತವರ ತಂದೆ ಹೈದರಾಲಿ ಹಾಗು ಅವರ ತಾಯಿಯವರ ಸಮಾಧಿ ಇದೆ. ಅಲ್ಲದೇ ಟಿಪ್ಪು ಸುಲ್ತಾನರ ಕುಟುಂಬದವರು, ಬ್ರಿಟೀಷರ ವಿರುದ್ಧ ಹೋರಾಡಿ ಮಡಿದ ಅಸಂಖ್ಯಾತ ಸೈನಿಕರ ಸಮಾಧಿಗಳಿವೆ. ಸನಿಹದಲ್ಲೇ ಪವಿತ್ರವಾದ ಮಸೀದಿ ಇದೆ ಇಂತಹ ಸ್ಥಳದಲ್ಲಿ ಅಶ್ಲೀಲ ಹಾಡಿನ ಚಿತ್ರೀಕರಣಕ್ಕೆ ಅವಕಾಶ ನೀಡಿದ್ದು ತಪ್ಪು ಎಂದು ಅವರು ಆಕ್ರೋಶ ವ್ಯಕ್ತಪಡೆಸಿದರು.
BIG NEWS : ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಜಿ. ಜಿ. ಗ್ರಾನೈಟ್ ಸ್ವಾಧೀನ ಪಡೆಸಿಕೊಳ್ಳಿ ಎಂದ ಕಾಂಗ್ರೆಸ್ ಕಾರ್ಯಕರ್ತರು..!!
ಇಂತಹ ಸ್ಥಳದಲ್ಲಿ ಕೋಮಲ್ ಕುಮಾರ್ ನಟನೆಯ ನಮೋ ಭೋತಮ್ಮ ಚಿತ್ರದ ದ್ವಂದಾರ್ಥದ ಅಶ್ಲೀಲ ಹಾಡಿನ ಚಿತ್ರೀಕರಣ ಮಾಡಲಾಗಿದೆ.ಇದಕ್ಕೆ ಅಲ್ಲಿನ ಟಿಪ್ಪು ಸುಲ್ತಾನ್ ವಕ್ಫ್ ಎಸ್ಟೇಟ್ ಸಮಿತಿ ಹಾಗೂ ರಾಜ್ಯ ವಕ್ಫ್ ಮಂಡಳಿ ನೇರ ಹೊಣೆಯಾಗಿದೆ. ಶಾಸಕ ತನ್ವೀರ್ ಸೇಠ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ವಕ್ಫ್ ಬೋರ್ಡ್ ಸದಸ್ಯರೂ ಆಗಿದ್ದಾರೆ. ಕೂಡಲೇ ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.