FLASH NEWS : ಸಚಿವ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡೆ

You are currently viewing FLASH NEWS : ಸಚಿವ ಶಿವರಾಜ ತಂಗಡಗಿ ಅವರಿಂದ ದಸರಾ ಉತ್ಸವ ಪೋಸ್ಟರ್ ಬಿಡುಗಡೆ

ಕೊಪ್ಪಳ : ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರು ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮೈಸೂರ ಪ್ರವಾಸ ಕೈಗೊಂಡು ಮೈಸೂರು ದಸರಾ ಉತ್ಸವ-2023ರ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ‌ ಅಕ್ಟೋಬರ್ 03ರಂದು‌ ಆಯೋಜಿಸಿದ್ದ ಸಭೆಯಲ್ಲಿ ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳ, ನಿರ್ದೇಶಕಿ ಕೆ.ಧರಣಿ ದೇವಿ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!