ಗಂಗಾವತಿ : ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ವಿದ್ಯಾರ್ಥಿಗಳು ಮಲಗುವ ಕೊಠಡಿ ಕಂಪ್ಯೂಟರ್ ಲ್ಯಾಬ್ ವಿದ್ಯುತ್ ವ್ಯವಸ್ಥೆ ಸೇರಿದಂತೆ ಹಾಸ್ಟೆಲ್‌ಗೆ ನೀರು ಪೂರೈಕೆ ಯಾಗುವ ಸಿಂಟೆಕ್ಸ್ ಗಳನ್ನು ಖುದ್ದು ಪರಿಶೀಲನೆ ನಡೆಸಿದ ಸಚಿವರು ಅವ್ಯವಸ್ಥೆ ಕಂಡು ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ಮೇಲೆ ಗರಂ ಆದರು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮುಖ್ಯಸ್ಥರಿಗೆ ದೂರವಾಣಿ ಕರೆ ಮಾಡಿ ಕೂಡಲೇ ಬೇಜವಾಬ್ದಾರಿತವಾಗಿ ನಡೆದುಕೊಂಡಿರುವ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಲು ಸೂಚಿಸಿದರು.
ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡ ಸಚಿವರು ಹಾಸ್ಟೆಲ್ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸ್ಥಳದಲ್ಲಿ ಜನರೇಟರ್ ಖರೀದಿ ಮಾಡುವಂತೆ ಸೂಚಿಸಿದರಲ್ಲದೆ ಗುಣಮಟ್ಟದ ಊಟ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ವಿದ್ಯಾರ್ಥಿಗಳಿಗೆ ಒದಗಿಸುವಂತೆ ತಾಕಿತು ಮಾಡಿದರು. ಇನ್ನು ನಿರ್ಲಕ್ಷ್ಯ ವಹಿಸಿದ ಹಾಸ್ಟೆಲ್ ವಾರ್ಡನ್ ಮೌನೇಶ್ವರಿ ಹಾಗೂ ಸಿಬ್ಬಂದಿಗಳಾದ ಗ್ಯಾನನಗೌಡ ಅವರನ್ನು ತಕ್ಷಣವೇ ಅಮಾನತ್ತು ಮಾಡುವಂತೆ ಸೂಚಿಸಿದರು.