ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಗೆ ಅಗ್ರಹಿಸಿ ಬಿಜೆಪಿ ಬ್ರಹತ್ ಪ್ರತಿಭಟನೆ
ಯಲಬುರ್ಗಾ : ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೋರೈಸುವಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಲಬುರ್ಗಾ ಬಿಜೆಪಿ ಮಂಡಲ ಇಂದು ಪಟ್ಟಣದಲ್ಲಿ ಬ್ರಹತ್ ಪ್ರತಿಭಟನೆ ನಡೆಸಿತು.
ಮಾಜಿ ಸಚಿವರಾದ ಹಾಲಪ್ಪ ಆಚಾರ್ ನೇತೃತ್ವದಲ್ಲಿ ಪಟ್ಟಣದ ಬಿಜೆಪಿ ಕಾರ್ಯಾಲಯದಿಂದ ಕಿತ್ತೂರು ಚೆನ್ನಮ್ಮ ವೃತ್ತದ ವರೆಗೆ ಜಾಥಾ ನಡೆಸಿ ಬಿಜೆಪಿ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ದಿಕ್ಕಾರ ಕೂಗಿದರು.
ರೈತರಿಗಾಗಿ ಏನನ್ನೂ ಮಾಡದ ಕಾಂಗ್ರೆಸ್ ಸರ್ಕಾರ ಇವತ್ತು ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲ ಅವರಿಸಿದರು ಕೂಡಾ ರೈತರಿಗೆ ಜನಸಾಮಾನ್ಯರಿಗೆ ಇದುವರೆಗೂ ಯಾವ ಸಹಕಾರ ಸಹಾಯ ರಾಜ್ಯ ಕಾಂಗ್ರೆಸ್ ಮಾಡಿಲ್ಲ,
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಹಿಂಬಾಗಿಲಿನಿಂದ ಅಧಿಕಾರ ಹಿಡಿದು ಜನಸಾಮಾನ್ಯರಿಗೆ, ರೈತರಿಗೆ ಮೋಸ ಮಾಡುತ್ತಿದೆ. ಇದುವರಿಗೂ ತಾಲೂಕಿನಲ್ಲಿ ಒಂದೇ ಒಂದು ಕೆಲಸವಾಗಿಲ್ಲ. ಗ್ಯಾರಂಟಿ ಯೋಜನೆಯ ಹೆಸರಲ್ಲಿ ಕಾಂಗ್ರೆಸ್ ಈ ರಾಜ್ಯವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಗುಡುಗಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಗುಳಗಣ್ಣವರ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿದರು. ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಸರ್ಕಾರ ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ಮತ್ತಷ್ಟು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ್ ಮರೀಬಸಪ್ಪನವರ್, ಹಿರಿಯ ಮುಖಂಡರಾದ ಬಸಲಿಂಗಪ್ಪ ಬೂತೆ, ಸಿ ಎಸ್ ಪೊಲೀಸ್ ಪಾಟೀಲ್, ವೀರಣ್ಣ ಹುಬ್ಬಳ್ಳಿ, ಅರವಿಂದ್ ಗೌಡ ಪಾಟೀಲ್, ಕಳಕಪ್ಪ ಕಂಬಳಿ, ಅಯ್ಯನಗೌಡ ಕೆಂಚಮ್ಮನವರ್, ಹಂಚ್ಯಾಳಪ್ಪ ತಳವಾರ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಂತರ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.