ಗದಗ: ಜಿಲ್ಲೆಯಲ್ಲಿ ಚುನಾವಣಾ ಅಕ್ರಮ ತಡೆ ಒಡ್ಡಲು ಚುನಾವಣಾಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ. ಇಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 4.82 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಗದಗ ಜಿಲ್ಲೆಯ ಹಿರೇಹಾಳ್ ಚೆಕ್ ಪೋಸ್ ನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ತಪಾಸಣೆ ಮಾಡಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4,82,230 ವ್ಯಕ್ತಿಯೊಬ್ಬರ ಬ್ಯಾಗ್ ನಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈತನು ಬಾದಾಮಿಯಿಂದ ಗದಗ ನಗರಕ್ಕೆ ಈ ಹಣದೊಂದಿಗೆ ತೆರಳುತ್ತಿದ್ದ ಎಂದು ತಿಳಿಸಿದ್ದಾನೆ. ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಸಿಕ್ಕ ಹಣವನ್ನು ಸೀಜ್ ಮಾಡಿ, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಚುನಾವಣಾಧಿಕಾರಿಗಳು ನೀಡಿದ್ದಾರೆ.
ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4.82 ಲಕ್ಷ ಹಣ ಜಪ್ತಿ
