ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ವರುಣನ ಆರ್ಭಟ ಕಡಿಮೆಯಾಗಿದ್ದು, ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದೆ. ಈ ತಿಂಗಳು ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ರಾಜ್ಯದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಅದೇ ರೀತಿಯಲ್ಲಿ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮಾಹಿತಿ ಇದೆ.