CRIME NEWS : ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್.!!

You are currently viewing CRIME NEWS : ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್.!!

ದಾವಣಗೆರೆ : 7 ವರ್ಷದ ಪುಟ್ಟ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ನಡೆದಿದ್ದು, ಈ ಘಟನೆಯೂ ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಈ ದುರ್ಘಟನೆ ನಡೆದಿದೆ.

ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವನ್ನು ನಡೆಸುತ್ತಿದ್ದ ಎನ್ನಲಾಗಿತ್ತು, ಈ ನಡುವೆ ಕಳೆದ 2 ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ.

ಪೋಷಕರ ದೂರಿನ ಅನ್ವಯ ಪೋಕ್ಸೋ ಪ್ರಕರಣದ ಅಡಿ ಕೇಸ್‌ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!