ಅಂದರ್ ಬಾಹರ್ ಗಿಲ್ಲ ಅವಕಾಶ. ಇಸ್ಪೀಟ್ ಜೂಜಾಟಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಬ್ರೇಕ್
ಕುಕನೂರು : ಸಂಪ್ರದಾಯಿಕ ದೀಪಾವಳಿ ಹಬ್ಬದ ಆಚರಣೆ ವೇಳೆ ಪುರುಷರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕ ಜಾಗೃತಿ ಪ್ರಕಟಣೆ ಹೋರಡಿಸಿದ್ದು ಸಂಪ್ರದಾಯಿಕ ಹಬ್ಬದ ಆಚರಣೆ ನೆಪದಲ್ಲಿ ಇಸ್ಪೀಟ್ ಆಡಿದರೆ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುತ್ತದೆ ಎಂದು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಯ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಸಂದೇಶ ಹೊರಡಿಸಲಾಗಿದೆ.
ಸೋಮವಾರ ದೀಪಾವಳಿ ಅಮಾವಾಸ್ಯೆ, ಮಂಗಳವಾರ ಬಲಿ ಪಾಡ್ಯಮಿ ಇದ್ದು ಈ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಕೊಪ್ಪಳ ಜಿಲ್ಲೆಯಲ್ಲಿ ಪುರುಷರು ಇಸ್ಪೀಟ್ ಜೂಜಾಟದಲ್ಲಿ ನಿರತರಾಗುವುದು ಸರ್ವೆ ಸಾಮಾನ್ಯ ಇದನ್ನು ಮನಗಂಡು ಜಿಲ್ಲಾ ಪೊಲೀಸ್ ಇಲಾಖೆ ಇಸ್ಪೀಟ್ ಆಟ ನಿರ್ಬಂಧಿಸಿ ಸಾರ್ವಜನಿಕ ತಿಳುವಳಿಕೆ ಪ್ರಕಟಣೆ ಹೊರಡಿಸಿದೆ.