ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದೆ. ಎಲ್ಲಾ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಮತ ಬೇಟೆಯಲ್ಲಿ ತೊಡಿಗಿದ್ದಾರೆ. ಈ ಚುನಾವಣಾ ಬ್ಯುಸಿಯ ನಡುವೆಯೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾತ್ರ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಾವಳಿ ವೀಕ್ಷಿಸಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಪಂದ್ಯವನ್ನು ವಿಕ್ಷಿಸಲು ಬಂದಿದ್ದಾರೆ. “ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ” ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್‌ಸಿಬಿಗೆ” ಎಂದು ಟ್ವೀಟ್ ಮಾಡಿದ್ದಾರೆ.
FLASH : ಆರ್‌ಸಿಬಿ ನನ್ನ ಹೆಮ್ಮೆಯ ತಂಡ ಎಂದ ಸಿದ್ದರಾಮಯ್ಯ!
