ಕೊಪ್ಪಳ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೊಪ್ಪಳ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಸಲ್ಲಿಕೆಗೆ ನವೆಂಬರ್ 15 ಅನ್ನು ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಪ್ರಸ್ತುತ ಈ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾನುಭವಿಗಳು ಸುವಿಧಾ ತಂತ್ರಾಂಶ : URL:https://suvidha.karnataka.gov.in/ ಈ ಮೂಲಕ ಆನ್‌ಲೈನ್‌ನಲ್ಲಿ ಡಿ.15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31, 32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ, ಹೊಸಪೇಟೆ ರಸ್ತೆ, ಕೊಪ್ಪಳ ಈ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲೂಗಳು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:08539-200460 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.