ಕೊಪ್ಪಳ : 2023-24ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ನವೆಂಬರ್ 28 ರಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರಿಗೆ ವಿವಿಧ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನ.28 ರಂದು ಬೆಳಿಗ್ಗೆ 10 ಗಂಟೆಗೆ ವಿಕಲಚೇತನರ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಆಸಕ್ತ ವಿಕಲಚೇತನರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.