ಕೊಪ್ಪಳ : ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕರ್ನಾಟಕ ರಾಜ್ಯ ಟ್ರಾನ್ಸ್ಜೆಂಡರ್ ನೀತಿ-2017 ನ್ನು ಜಾರಿಗೊಳಿಸಲಾಗಿದೆ. ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಜಿಲ್ಲಾ ಮಟ್ಟದಲ್ಲಿ ಟ್ರಾನ್ಸ್ಜೆಂಡರ್‌ರವರ ಶ್ರೇಯೋಭಿವೃದ್ಧಿಗಾಗಿ, ಅವರಿಗೆ ಸಮಾಜದಲ್ಲಿ ಗೌರವಯುತವಾದ ಅಸ್ತಿತ್ವ ಒದಗಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಈ ಸಮುದಾಯಕ್ಕೆ ಒದಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಟ್ರಾನ್ಸ್ಜೆಂಡರ್‌ರವರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ/ಕೋಶದ ಸಭೆಯನ್ನು ನವೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ವಹಿಸಿಕೊಳ್ಳಲಿದ್ದು, ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.