ಕೊಪ್ಪಳ : ಜಿಲ್ಲೆಯಾದ್ಯಂತ ಆಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಈ ಕುರಿತು ಅಧಿಕಾರಿಗಳು ಪರಿಶೀಲನೆ ಮಾಡದೆ. ಕರ್ತವ್ಯ ಲೋಪ ಮಾಡಲಾಗುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಮರಳು ಸಾಗಣೆಗೆ ಪರವಾನಗಿ ಪಡೆದು ನಿಯಮ ಮೀರಿ ಆಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ತರಿಗೆ ಕಟ್ಟದೆ ವಂಚನೆ ಮಾಡಲಾಗುತ್ತಿದೆ ಎಂದು ಕೆಲ ಸಾಮಾಜಿಕ ಹೋರಾಟಗಾರರು ಆರೋಪಿಸುತ್ತಿದ್ದಾರೆ. ಹಾಗಾಗಿ ಅಧಿಕಾರಿಗಳ ವಿರುದ್ಧ ಈ ಆರೋಪಗಳು ಹೆಚ್ಚಾಗುತ್ತಿದ್ದರಿಂದ ಇಂದು ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳು ಫೀಲ್ಡಿಗೆ ಇಳಿದಿದ್ದಾರೆ ಎನ್ನಲಾಗಿದೆ.
ಅದರಂತೆ ಇಂದು ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಸಮೀಪದ ಹಳ್ಳದಲ್ಲಿ ಪಟ್ಟಾ ಜಮೀನಿನಲ್ಲಿ ಮರುಳುಗಾರಿಕೆಗೆ ಒಪ್ಪಿಗೆ ನೀಡಲಾಗಿದ್ದು, ಆದರೆ, ಈ ಮರುಳು ಪಾಯಿಂಟ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರಿಂದ ದೂರು ನೀಡಿಲಾಗಿದೆ. ಹಾಗಾಗಿ ಇಂದು ಕೊಪ್ಪಳ ಜಿಲ್ಲೆಯ ಫಾಝೀಲ್ ನೇತೃತ್ವದ ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
“ಪರವಾನಿಗೆ ಪಡೆದು ಮರಳು ಪಾಯಿಂಟ್ ಓಪನ್ ಮಾಡಿ ಬೇಕಾಬೀಟ್ಟಿಯಾಗಿ ಕಾನೂನು ಭಾಹಿರವಾಗಿ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ನಮಗೆ ದೂರ ಬಂದಿದೆ. ಈ ಕಾರಣ ನಾವು ಸ್ಥಳ ಪರಿಶೀಲನೆ ಮಾಡಿದ್ದೇವೆ, ಬಳಿಕ ಇದಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ವಿಚಾರಿಸಿ ಕ್ರಮ ತಗೆದುಕೊಳ್ಳುತ್ತೇವೆ “
ಫಾಝೀಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ.
ವರದಿ : ಚಂದ್ರು ಆರ್ ಭಾನಾಪೂರ್
(9538631636)