LOCAL NEWS : ರಕ್ತದಾನ ಶಿಬಿರ : ‘ರಕ್ತದಾನ ಮಾಡಿ ಜೀವ ಕಾಪಾಡಿ’

You are currently viewing LOCAL NEWS : ರಕ್ತದಾನ ಶಿಬಿರ : ‘ರಕ್ತದಾನ ಮಾಡಿ ಜೀವ ಕಾಪಾಡಿ’

ಕುಕನೂರು : ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಬೇಕು’ ಎಂದು ತಾಲ್ಲೂಕ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭಾಕರ್ ಆಚಾರ್ ಹೇಳಿದರು.

ಕುಕನೂರು ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಮಾರುತೇಶ್ವರ ಕಾರ್ತಿಕೋತ್ಸವದ ಅಂಗವಾಗಿ ರಕ್ತದಾನ ಶಿಬಿರದಲ್ಲಿ ಯುವಕರ ರಕ್ತದಾನ ಮಾಡಿದರು.

ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಶುಕ್ರವಾರ ಮಾರುತೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ದೇಶದಲ್ಲಿ ಪ್ರತಿನಿತ್ಯ ಅಪಘಾತ ಪ್ರಕರಣಗಳಲ್ಲಿ ಸಾಕಷ್ಟು ಮಂದಿ ಮೃತಪಡುತ್ತಿದ್ದಾರೆ’ ಎಂದರು.

‘ಮನುಷ್ಯನಿಗೆ ಮನುಷ್ಯನ ರಕ್ತವನ್ನೇ ನೀಡಬೇಕು. ಆದರೆ, ಅನೇಕರಿಗೆ ರಕ್ತದಾನ ಮಾಡಲು ಆಸಕ್ತಿ ಇಲ್ಲ. ಲಕ್ಷಾಂತರ ಮಂದಿ ರಕ್ತಸ್ರಾವದಿಂದಾಗಿ ಜೀವ ಉಳಿಸಿಕೊಳ್ಳಲು ಜೀವನ್ಮರಣ ಹೋರಾಟ ನಡೆಸುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡಿ ಜೀವ ಉಳಿಸಬೇಕು’ ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಹನುಮಂತ್ ಬನ್ನಿಕೊಪ್ಪ ಮಾತನಾಡಿ, ಮಹಿಳೆಯರು ಪ್ರಸವದ ಸಂದರ್ಭದಲ್ಲಿ ರಕ್ತಹೀನತೆಯಿಂದ ತೊಂದರೆಗೆ ಸಿಲುಕಿ ಮೃತಪಟ್ಟಿರುವ ನಿದರ್ಶನಗಳಿವೆ. ಇಂತಹವರಿಗೂ ನೀಡುವ ರಕ್ತವು ಜೀವ ದ್ರವ್ಯವಾಗಿ ಪ್ರಾಣ ಉಳಿಸುತ್ತದೆ. ರಕ್ತದಾನದಿಂದ ಆರೋಗ್ಯ ಸುಧಾರಿಸುತ್ತದೆ. ದೇಹದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ’ ಎಂದು ಹೇಳಿದರು..

ಮಹಿಳೆಯರಲ್ಲಿ ಶೇ 80ರಷ್ಟು ಮಂದಿಗೆ ರಕ್ತಹೀನತೆ ಸಮಸ್ಯೆ ಕಾಡುತ್ತಿದೆ. ದಿನದಿಂದ ದಿನಕ್ಕೆ ರಕ್ತದ ಬೇಡಿಕೆ ಹೆಚ್ಚುತ್ತಿದೆ. ಆದರೆ, ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳ ಸಂಖ್ಯೆ ಹೆಚ್ಚಿಸಬೇಕು’ ಎಂದರು.

ಕಪತಪ್ಪ ಅಂಗಡಿ, ಹನುಮಂತ್ ಪೂಜಾರ್, ಮಹೇಶ್ ಗಾವರಾಳ,, ಸಚಿನ್ ಆಚಾರ್, ಬಸವರಾಜ್ ಅಂಗಡಿ, ಪ್ರಭುರಾಜ್ ಪಾಟೀಲ್, ಪ್ರಕಾಶ್, ದೇವೇಂದ್ರಪ್ಪ ಇದ್ದರು.

Leave a Reply

error: Content is protected !!