ಕುಕನೂರು : ತಾಲೂಕಿನ ಕಕ್ಕಿಹಳ್ಳಿ ತಾಂಡಾದ KSRTC ಬಸ್ ನಿರ್ವಾಹಾಕ ಕಂ ಚಾಲಕನಾಗಿದ್ದ ರವಿ ಬೆಳಗೆರಿ (ವರ್ಷ-47)ಯವರು ಇಂದು ಕರ್ತವ್ಯ ನಿರತವಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೃತರು ಚಿಕ್ಕಮಗಳೂರಿನ ಮೂಡಿಗೆರೆ ಬಸ್ ಡಿಪೋಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗಿನ ಜಾವ ಕರ್ತವ್ಯದಲ್ಲಿ ಇರುವಾಗಲೇ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಇವರಿಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದರು, ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿದ್ದಾರೆ.
ಮೃತರಿಗೆ ಮೂರು ಜನ ಪುತ್ರರನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.