ಬೆಳಗಾವಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಕರ ಕೊರತೆಯನ್ನು ನಿಗಿಸುವ ಜೊತೆಗೆ ಈ ಭಾಗದ ಶಾಲೆಗಳಿಗೆ ಅಗತ್ಯವಿರುವ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಆದ್ಯತೆ ನೀಡಲಾಗುವುದು ಎಂದು ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 GOOD NEWS : ಬಂಪರ್ ಆಫರ್ : ಈ ಮಕ್ಕಳಿಗೆ ಶುಭ ಸುದ್ದಿ..!!
ನಿನ್ನೆ ಬೆಳಗಾವಿಯ ಸುವರ್ಣಸೌಧದ ಕಲಾಪದಲ್ಲಿ ವಿಧಾನಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ವಿಧಾನಪರಿಷತ್ತ ಸದಸ್ಯ ಶಶೀಲ್ ನಮೋಶಿ ಪ್ರಶ್ನೆಗೆ ಉತ್ತರಿಸಿದ ಸಚಿವ, ‘ಶಾಲಾ ಶಿಕ್ಷಣ ಆಯುಕ್ತಾಲಯದಲ್ಲಿ ಹಲವು ವರ್ಷಗಳಿಂದ ಬೀಡು ಬಿಟ್ಟಿರುವ ಸಿಬ್ಬಂದಿಗಳ ವರ್ಗಾವಣೆಗೆೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 BREAKING : ಅರ್ಜುನ ಇನ್ನಿಲ್ಲ : ಭಾವುಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ..!!
ರಾಜ್ಯದ ಪ್ರಾಥಮಿಕ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕ ಕುರಿತಂತೆ ಸದಸ್ಯ ಎಸ್.ವಿ. ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್. ಮಧು ಬಂಗಾರಪ್ಪ ಅವರು, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದರು.