ವಿಷಯ ಸಂಗ್ರಹ :- ಚಂದ್ರು ಆರ್ ಭಾನಾಪುರ್
ಬೆಂಗಳೂರು : ನೂತನ ಸಂಸತ್ ಭವನದಲ್ಲಿ ಲೋಕಸಭೆಯ ಕಲಾಪ ವೇಳೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಕರ್ನಾಟಕದ ಮೈಸೂರು ಮೂಲದ ಮನೋರಂಜನ್ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಬಾರಿ ಪಾಸ್ ಪಡೆದಿದ್ದ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 BIG ALERT : ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಎಚ್ಚರ…ಎಚ್ಚರ..!!
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 LOCAL EXPRESS : ಅಡೂರು ಗ್ರಾಮದ ಶ್ರೀ ವೀರಭದ್ರೇಶ್ವರ ಕಾರ್ತಿಕ ಹಾಗೂ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮದಲ್ಲಿ ನಾಟಕ ಪ್ರದರ್ಶನ!
ಈ ಕುರಿತು ಹಿಂದೆ ಕಳೆದ ಅಧಿವೇಶನದಲ್ಲಿ ನೂತನ ಸಂಸತ್ ಭವನವನ್ನು ವೀಕ್ಷಣೆ ಮಾಡುತ್ತೇನೆ ಎಂದು ಹೇಳಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್ ಪಾಸ್ ಪಡೆದುಕೊಂಡಿದ್ದ. ಈ ವೇಳೆ ಸಂಸತ್ ಪ್ರವೇಶಿಸಿರುವ ಮನೋರಂಜನ್ ಅಲ್ಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ಮಾಡಿ ಇದೀಗ ಮತ್ತೊಮ್ಮೆ ಪಾಸ್ ನೀಡುವಂತೆ ಮನವಿ ಮಾಡಿದ್ದ. ಈ ವೇಳೆ ಪ್ರತಾಪ್ ಸಿಂಹ ಕಚೇರಿಯವರು ಪಾಸ್ ನೀಡಲು ನಿರಾಕರಿಸಿದ್ದರು.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 BIG NEWS : ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಅಕ್ರೋಶ ಹೊರಹಾಕಿದ ನವೀನ್ ಗುಳಗಣ್ಣನವರ್..!
ಪದೇ ಪದೇ ಪಾಸ್ ನೀಡಲು ಸಾಧ್ಯವಿಲ್ಲ ಎಂದು ಸಂಸದರ ಕಛೇರಿಯವರು ತಿರಸ್ಕರಿಸಲಾಗಿತ್ತು. ಬಳಿಕ ಮೈಸೂರಿನ ಆಪ್ತ ಸಹಾಯಕರ ಮೂಲಕ ಒತ್ತಡ ಹೇರಿ ದೆಹಲಿಯಲ್ಲಿರುವ ಪ್ರತಾಪ್ ಸಿಂಹರ ಕಚೇರಿಯಿಂದ ಪಾಸ್ ಪಡೆದಿದ್ದ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಹೆಚ್ಚಿನ ಸುದ್ದಿಗಾಗಿ ಕ್ಲಿಕ್ ಮಾಡಿ….👉 BIG NEWS : ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ : 10 ಕೋಟಿ ದಂಡ, 12 ವರ್ಷ ಜೈಲು..!!
ಒಂದು ಪಾಸ್‌ನಲ್ಲಿ ಇಬ್ಬರು ಸಂಸತ್ ಪ್ರವೇಶ ಮಾಡಲು ಅವಕಾಶವಿದೆ. ಪಾಸ್ ಅನ್ನು ಸಂಗ್ರಹ ವಸ್ತುವಾಗಿ ಇಟ್ಟುಕೊಳ್ಳಲು ಸಾಗರ್ ಶರ್ಮ ಇಷ್ಟ ಪಟ್ಟಿದ್ದಾನೆ. ಹೀಗಾಗಿ ಸಾಗರ್ ಹೆಸರಲ್ಲಿ ಪಾಸ್ ಕೊಡಿ ಎಂದು ಮಂಗಳವಾರ ಸಂಜೆ ಪಾಸ್ ಪಡೆದುಕೊಂಡಿದ್ದ. ಅದರಂತೆ ಮನೋರಂಜನ್ ಹಾಗೂ ಸಾಗರ್ ಶರ್ಮ ಸಂಸತ್ ಪ್ರವೇಶ ಮಾಡಿದ್ದರು ಎನ್ನಲಾಗಿದೆ.