ಬೆಂಗಳೂರು : 2024ರ ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಬಿಜೆಪಿಗೆ ಬಿಗ್ ಶಾಕ್ ಕೊಟ್ಟು ಕಮಲ ತೊರೆದ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿಯ “ಭಾರತ್ ಜೋಡೋ ಯಾತ್ರೆ ಭವನ”ದಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರು, ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಅವರಿಗೆ ಕಾಂಗ್ರೆಸ್ ಶಾಲು, ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.