ದಲಿತರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್.!!
ಕೊಪ್ಪಳ : ದಲಿತ ಸಮುದಾಯದ ಕಲ್ಯಾಣಕೆಂದು ಮೀಸಲಿಟ್ಟ ಎಸ್ ಎಸ್ ಟಿ, ಟಿ ಎಸ್ ಎಸ್ ಟಿ ಹಣವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಬಿಜೆಪಿ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ, ದಲಿತ ಸಮಾಜದ ಕಲ್ಯಾಣಕೆಂದು ಮೀಸಲಿಟ್ಟಿರುವ ಅನುದಾನದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ, ಎಂದು ಕಾಂಗ್ರೆಸ್ ಸರ್ಕಾರದ ಧೋರಣೆ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್, ಬಿಜೆಪಿ ವಿಭಾಗಿಯ ಸಹ ಪ್ರಭಾರಿ ಚಂದ್ರಶೇಖರ ಹಲಗೇರಿ, ರಾಜ್ಯ ಎಸ್ಸಿ ಮೋರ್ಚಾ ಕಾರ್ಯಕ್ರಮ ಸದಸ್ಯರಾದ ಕನಕ ಮೂರ್ತಿ ಚಲವಾದಿ , ಜಿಲ್ಲಾ ಜ ಪ್ರಧಾನ ಕಾರ್ಯದರ್ಶಿಗಳಾದ ರಮೇಶ ನಾಡಿಗೇರ, ಸುನಿಲ ಹೇಸರೂರ, ಶಿವು ಅರಕೇರಿ, ಖಜಾಂಚಿ ನರಸಿಂಗ ರಾವ್ ಕುಲಕರಣಿ, ಶ್ರೀಮತಿ ಮಂಜುಳಾ ಕರಡಿ, ಗಣೇಶ ವರ್ತಟ್ನಾಳ, ಲಕ್ಷ್ಮಣ ಕಾಳಿ, ಮಹಾಲಕ್ಷ್ಮಿ ಕಂದಾರಿ, ಪ್ರದೀಪ ಹಿಟ್ನಾಳ, ಮಾಂತೇಶ್ ಮೈನಹಳ್ಳಿ, ಮಂಜುನಾಥ್ ಸಜ್ಜನ, ಮಂಜುನಾಥ ಮುಸಲಾಪುರ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.