BREAKING : ಫಾಸ್ಟ್ ಫುಡ್ ಪ್ರೀಯರಿಗೆ ಬಿಗ್ ಶಾಕ್..! : ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಬ್ಯಾನ್..!

You are currently viewing BREAKING : ಫಾಸ್ಟ್ ಫುಡ್ ಪ್ರೀಯರಿಗೆ ಬಿಗ್ ಶಾಕ್..! : ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಬ್ಯಾನ್..!

ಬೆಂಗಳೂರು : ರಾಜ್ಯ ಸರ್ಕಾರದಿಂದ ಫಾಸ್ಟ್ ಫುಡ್ ಪ್ರೀಯರಿಗೆ ಬಿಗ್ ಶಾಕ್ ನೀಡಿದೆ. ಈ ಹಿಂದ ಗೋವಾದಲ್ಲಿ ಗೋಬಿ ಮಂಚೂರಿ ಬ್ಯಾನ್ ಮಾಡಿದೆ ಆದೇಶ ನೀಡಲಾಗಿತ್ತು, ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಗಳಲ್ಲಿ ಕೃತಕ ಬಣ್ಣ ಬೇರಸುವಿಕೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಬಗ್ಗೆ ವಿಶ್ಲೇಷಣೆಗೊಳಪಡಿಸಲಾಗಿದೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತಂತೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ರಾಜ್ಯದಲ್ಲೂ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ ಎಂದು ತಳಿದು ಬಂದಿದೆ.

ಚೈನಿಸ್ ಫಾಸ್ಟ್ ಫುಡ್ ಆದ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು, ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಎನ್ನಲಾಗಿದೆ.

Leave a Reply

error: Content is protected !!