ನವದೆಹಲಿ : 2024ರ ಲೋಕಸಭಾ ಚುನಾವಣೆಯ ಇದೀಗ ದಿನಾಂಕ ಹೊರಬಿದ್ದು, ಇದೀಗ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದ್ದು, ದೇಶದಲ್ಲಿ 7 ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಎಪ್ರಿಲ್ 26 ಮತ್ತು ಮೇ 7ರಂದು ಎರಡನೇಯ ಹಂತದ ಲೋಕಸಭಾ ಚುನಾವಣೆ ನಡಯಲಿದೆ. ಇದರಲ್ಲಿ ಎಪ್ರಿಲ್ 26 ರಂದು ದಕ್ಷಣ ಕರ್ನಾಟಕದ ಮತದಾನ ನಡೆಯಲಿದೆ. ಅದೇ ರೀತಿಯಲ್ಲಿ ಮೇ 7 ರಂದು ಎರಡನೇಯಲ್ಲಿ ಉತ್ತರ ಕರ್ನಾಟಕದಲ್ಲಿ ನಡೆಯಲಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.
ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.