ಕಲಬುರಗಿ : ರಾಜ್ಯದಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಇತ್ತೀಚೆಗೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಏಕನಾಥ ವಾಗಮೋಡೆ (55) ಸತೀಶ ಶೆಳಕೆ (40) ಎಂಬುವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳು ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವಾಗ ಜೋರಾಗಿ ಮಳೆ ಬಂದಿದೆ. ಈ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ನಿಂತಿದ್ದಾಗ ಸಿಡಿಲು ಬಡದು ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.