BIG NEWS : ಶ್ರೀ ಹುಲಗೆಮ್ಮ ದೇವಿಯ ಜಾತ್ರಾ ಮಹೋತ್ಸವ : ಇಂದಿನಿಂದ 5 ದಿನಗಳ ಭರ್ಜರಿ ಮಹೋತ್ಸವ..!!

You are currently viewing BIG NEWS : ಶ್ರೀ ಹುಲಗೆಮ್ಮ ದೇವಿಯ ಜಾತ್ರಾ ಮಹೋತ್ಸವ : ಇಂದಿನಿಂದ 5 ದಿನಗಳ ಭರ್ಜರಿ ಮಹೋತ್ಸವ..!!

ಕೊಪ್ಪಳ : ಕೊಪ್ಪಳ ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲೊಂದಾದ ಹುಲಿಗಿ ಗ್ರಾಮದ ಶ್ರೀ ಹುಲಗೆಮ್ಮ ದೇವಿ ದೇವಸ್ಥಾನದ 2024ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವು ಇಂದಿನಿಂದ (ಮೇ 30ರಿಂದ) ಜೂನ್ 3ರವರೆಗೆ ನಡೆಯಲಿದೆ ಎಂದು ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ಈ ದೇವಸ್ಥಾನವೂ ಉತ್ತರ ಕರ್ನಾಟಕ ಭಾಗದ ಸುಪ್ರಸಿದ್ಧ ದೇವಸ್ಥಾನ ವಾಗಿದ್ದು, ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಜಾತ್ರೆ ಸಮಯದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

*ಧಾರ್ಮಿಕ ಕಾರ್ಯಕ್ರಮಗಳ ವಿವರ*

ಜಾತ್ರಾ ಮಹೋತ್ಸವ ಅಂಗವಾಗಿ ಅನೇಕ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು,
* ಶ್ರೀ ಹುಲಿಗೆಮ್ಮ ದೇವಿಯ ಜಾತ್ರೆಯ ನಿಮಿತ್ತ ಇಂದು ಸಂಜೆ 7 ಗಂಟೆಗೆ ಉತ್ಸವ.
* ಮೇ 31 ರಂದು ಸಂಜೆ 5:30 ಗಂಟೆಗೆ ಅಕ್ಕಿಪಡಿ ಮಹಾ ರಥೋತ್ಸವ ಜರುಗಲಿದೆ.
* ಜೂನ್ 01 ರಂದು ಬಾಳಿದಂಡಿಗೆ, ರಾತ್ರಿ 8 ಗಂಟೆಗೆ ಕೊಂಡದ ಪೂಜಾ ಕಾರ್ಯಾಕ್ರಮ, ರಾತ್ರಿ 3:30 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4 ಗಂಟೆಗೆ ಶ್ರೀದೇವಿಗೆ ಪ್ರಸಾದ ಕಟ್ಟುವುದು, ಬೆಳಗಿನ ಜಾವ 4:30 ಕ್ಕೆ ಬಾಳಿದಂಡಿಗೆ ಆರೋಹಣ ನಡೆಯಲಿದೆ.
* ಜೂನ್ 02 ರಂದು ಪಾಯಸ ಅಗ್ನಿಕೊಂಡ ನಡೆಯಲಿದ್ದು, ರಾತ್ರಿ 8 ಗಂಟೆಗೆ ಕೊಂಡದ ಪೂಜಾ, ರಾತ್ರಿ 9 ಕ್ಕೆ ಹಿಡಿದಕ್ಷಿಣೆ ವಿತರಣೆ, 9:30 ಕ್ಕೆ ಪಡಗದ ಪೂಜಾ, ಬೆಳಗಿನಜಾವ 4 ಗಂಟೆಗೆ (ಬ್ರಾಹ್ಮೀ ಮುಹೂರ್ತದಲ್ಲಿ) ಗಂಗಾದೇವಿ ಪೂಜಾ, ಬೆಳಗಿನ ಜಾವ 4:30ಕ್ಕೆ ಗಂಟೆಗೆ ಶ್ರೀದೇವಿಗೆ ಪ್ರಸಾದ ಕಟ್ಟುವುದು, ಬೆಳಗಿನ ಜಾವ 5:30 ಗಂಟೆಗೆ ಶ್ರೀದೇವಿಗೆ ಪಾಯಸ ಪ್ರಸಾದ ನಿವೇದನೆ ಹಾಗೂ ಜೂನ್ 03 ರಂದು ಬೆಳಿಗ್ಗೆ 6:30 ಗಂಟೆಗೆ (ದ್ವಾದಶಿ ನಸುಕಿನಲ್ಲಿ) ಅಗ್ನಿಕುಂಡ ನಡೆಯಲಿದೆ.

ಜೂನ್ 25 ರಂದು ರಾತ್ರಿ 8 ಗಂಟೆಗೆ ಶ್ರೀದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಎಂದು ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!