CRIME NEWS : ಭವಾನಿ ರೇವಣ್ಣಗೆ ಮತ್ತೆ ಸಂಕಷ್ಟ : ಜಾಮೀನು ಪ್ರಶ್ನಿಸಿ, ಸುಪ್ರೀಂ ಮೆಟ್ಟಿಲೇರಿದ ಸರ್ಕಾರ..!!

You are currently viewing CRIME NEWS : ಭವಾನಿ ರೇವಣ್ಣಗೆ ಮತ್ತೆ ಸಂಕಷ್ಟ : ಜಾಮೀನು ಪ್ರಶ್ನಿಸಿ, ಸುಪ್ರೀಂ ಮೆಟ್ಟಿಲೇರಿದ ಸರ್ಕಾರ..!!

ಪ್ರಜಾ ವೀಕ್ಷಣೆ ಸುದ್ದಿಜಾಲ :-

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಇದೀಗ ಈ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಮನವಿಯನ್ನು ಕಳೆದ ಜೂನ್‌ 18ರಂದು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಪೀಠ ಪುರಸ್ಕರಿಸಿತ್ತು. ಈ ಆದೇಶವನ್ನು ರಾಜ್ಯ ಸರ್ಕಾರವು ಪ್ರಶ್ನಿಸಿದ್ದು, ವಿಚಾರಣೆಯನ್ನು ಬುಧವಾರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುಯಾನ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಲಿದೆ.

ಸಂತ್ರಸ್ತೆಗೆ ಆಹಾರ ನೀಡಿಲ್ಲ ಮತ್ತು ಉಡುಪು ಬದಲಿಸಲು ಭವಾನಿಗೆ ಅವಕಾಶ ನೀಡಿಲ್ಲ ಎಂದು ಪ್ರಾಸಿಕ್ಯೂಷನ್‌ ವಾದಿಸಿತ್ತು. ಸಂತ್ರಸ್ತೆಯ CRPC ಸೆಕ್ಷನ್‌ 164 ಹೇಳಿಕೆ ಓದಿದಾಗ ಬಟ್ಟೆ ಮತ್ತು ಊಟವನ್ನು ಭವಾನಿ ಕಳುಹಿಸಿದ್ದರು ಎಂದು ಹೇಳಿದ್ದಾರೆ. ಭವಾನಿ ರೇವಣ್ಣ ಸೇರಿ ಹಲವರ ವಿರುದ್ದ IPC ಸೆಕ್ಷನ್‌ 364ಎ, 365 & 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಭವಾನಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಹೈಕೋರ್ಟ್ ನೀಡಿರುವ ನಿರೀಕ್ಷಣ ಜಾಮೀನು ಆದೇಶವನ್ನು ಪ್ರಶ್ನಿಸಿ, ಇದೀಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದೆ. ಹಾಗಾಗಿ ಸದ್ಯಕ್ಕೆ ಮಾಜಿ ಪ್ರಧಾನಿ ದೊಡ್ಡ ಗೌಡರ ಕುಟುಂಬಕ್ಕೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿವೆ ಎಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಆಗುತ್ತಿದೆ.

Leave a Reply

error: Content is protected !!