ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಇಂದೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಇಂದು ಮಧ್ಯಾಹ್ನ 1.30 ಗಂಟೆಗೆ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಹಾಗೂ ಮಧ್ಯಾಹ್ನ 2.30 ಗಂಟೆಗೆ ಕ್ಯಾಪಿಟಲ್ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಮುಂಖ್ಯಮಂತ್ರಿ ಬೊಮ್ಮಾಯಿ ಅವರು ನಡೆಸಲಿರುವ ಈ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿ ಹೈಕಮಾಂಡ್ ಗೆ ಪಟ್ಟಿ ಕಳುಹಿಸಲಾಗಿದ್ದು, ರಾಜ್ಯ ಬಿಜೆಪಿ ಕಳಿಸಿರುವ ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.