BREAKING : ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಬಂಧನ..!! : ಕಾರಣವೇನು ಗೊತ್ತಾ?

You are currently viewing BREAKING : ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಬಂಧನ..!! : ಕಾರಣವೇನು ಗೊತ್ತಾ?

ಪ್ರಜಾ ವೀಕ್ಷಣೆ ಸುದ್ದಿಜಾಲ:-

ರಾಮನಗರ : ರಾಮನಗರದಲ್ಲಿ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಬಳಿಕ ನಿಖಿಲ್ ಕುಮಾರಸ್ವಾಮಿ ಅವರನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂಬುವುದು ಇಲ್ಲಿದೆ ನೋಡಿ….

ರಾಮನಗರದ ಸಹಕಾರ ಸಂಘದ ಚುನಾವಣೆ ಮುಂದೂಡಿದ ಕಾರಣ ಇದನ್ನು ಖಂಡಿಸಿ ಇಂದು ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿ ಬಳಿಕ ಅವರನ್ನು ವಶ ಪಡೆಸಿಕೊಂಡರು.

ನಗರದ ಕಂದಾಯ ಭವನದ ಬಳಿಕ ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ನಿಖಿಲ್ ಕುಮಾರ್ ಸೇರಿದಂತೆ ಹಲವು ಜೆಡಿಎಸ್‌ ನಾಯಕರು, ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!