ಬೆಂಗಳೂರು : ಇದೀಗ ರಾಜ್ಯದಲ್ಲಿ ಮುಡಾ ಪ್ರಕರಣ ದಿನದಿಂದ ದಿನಕ್ಕೆ ಭಾರಿ ಸಂಚಲನವನ್ನೇ ಮೂಡಿಸುತ್ತಿದ್ದು, ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮೈಸೂರಲ್ಲಿ ಇಂದು ಬಿಜೆಪಿ ತೀವ್ರ ಪ್ರತಿಭಟನೆ ಮಾಡಿತ್ತು. ಈ ವೇಳೆಯಲ್ಲಿ ಕೇಲ ಬಿಜೆಪಿ ನಾಯಕರನ್ನು ಮೈಸೂರು ಪೊಲೀಸರು ಬಂಧನ ಮಾಡಿದ್ದರು. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದು, ‘ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಎಚ್ಚರಿಕೆ ನೀಡಿದ್ದಾರೆ.
“ಸಿದ್ದರಾಮಯ್ಯನವರೇ ನೀವು ನಮ್ಮನ್ನು ಬಂಧಿಸುತ್ತೀರಾ? ಮುಡಾ ಪ್ರಕರಣದಲ್ಲಿ ನೀವೇ ಅರೆಸ್ಟ್ ಆಗಬಹುದು. ಅಗತ್ಯ ಬಿದ್ದರೆ ಈ ಪ್ರಕರಣದಲ್ಲಿ ನಾವು ಕಾನೂನು ಹೋರಾಟಕ್ಕೂ ಮುಂದಾಗುತ್ತೇವೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನವರ ಧರ್ಮಪತ್ನಿ ಹೆಸರಲ್ಲಿದೆ ಅಂತಾರೆ. ನೀವು ಅಧಿಕಾರಕ್ಕೆ ಬಂದ ಕೂಡಲೇ ಇದನ್ನು ಗಮನಿಸಿ ವಾಪಸ್ ಕೊಡಬೇಕಿತ್ತು ಅಲ್ವಾ… ನೀವು ಮಾಡಿದ್ದೇನು?”
“ಕೂಡಲೇ ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಂದು 1985ರಲ್ಲಿ ಇಂದಿರಾಗಾಂಧಿ ಸರ್ವಾಧಿಕಾರಿಯಾಗಿದ್ದರು. ಇಂದು 2023-24ರಲ್ಲಿ ಸಿದ್ದರಾಮಯ್ಯ ಸರ್ವಾಧಿಕಾರಿ ಆಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.