ಹೈದ್ರಾಬಾದ್ : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಬಾಷಾ ಸ್ಟಾರ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರನ್ನ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಲಗಳ ಪ್ರಕಾರ, ಹೈದರಾಬಾದ್ ಪೊಲೀಸರು ನಗರದ ಹೊರವಲಯದ ರಾಜೇಂದ್ರ ನಗರದಲ್ಲಿ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ರಾಜೇಂದ್ರ ನಗರದ ಪೊಲೀಸರು ಮತ್ತು ಎಸ್ಒಟಿ (ವಿಶೇಷ ಕಾರ್ಯಾಚರಣೆ ತಂಡ) ಜಂಟಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 200 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ಸುಮಾರು 2 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.