ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗಳಲ್ಲಿ ಹಳೇ ಪಿಂಚಣಿ ಯೋಜನೆ ಜಾರಿ, 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಿ, ವೇತನ ನೀಡುವುದಾಗಿತ್ತು. ಇವುಗಳಲ್ಲಿ 7ನೇ ವೇತನ ಆಯೋಗ (7th Pay Commission) ಜಾರಿಯ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮುಂದಿನ ತಿಂಗಳು ಆಗಸ್ಟ್.1ರಿಂದ 7ನೇ ವೇತನ ಆಯೋಗವನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ.
ನಿನ್ನೆ (ಮಂಗಳವಾರ) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆಯಲ್ಲಿ 7ನೇ ವೇತನ ಆಯೋಗದ ಜಾರಿಯೇ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ಅಜೆಂಡಾ ಆಗಿತ್ತು. ಇಂತಹ ಬೇಡಿಕೆಯನ್ನು ಈಡೇರಿಸುವಂತ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಆಗಸ್ಟ್ 1ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವು ಜಾರಿಗೊಳ್ಳಲಿದೆ. ಈ ಮೂಲಕ ಸರ್ಕಾರ, ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ.